alex Certify ಸೋಮವಾರವೂ ದೇಶದಲ್ಲಿ ಕೊರೊನಾ ಅಬ್ಬರ: ಒಂದೇ ದಿನ 78,512 ಸೋಂಕಿತರು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಮವಾರವೂ ದೇಶದಲ್ಲಿ ಕೊರೊನಾ ಅಬ್ಬರ: ಒಂದೇ ದಿನ 78,512 ಸೋಂಕಿತರು ಪತ್ತೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ದಿನ ನಿತ್ಯ ದಾಖಲೆ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 78,512 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 36,21,245ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ನಿನ್ನೆ ಒಂದೇ ದಿನದಲ್ಲಿ 948 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 63,498ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 765,302 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 2.7 ಮಿಲಿಯನ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿಸಿದೆ.

ಇನ್ನು ದೇಶಾದ್ಯಂತ ಸೆ.1ರಿಂದ ಅನ್ ಲಾಕ್ 4.0 ಪ್ರಕ್ರಿಯೆಗಳು ಜಾರಿಯಾಗುತ್ತಿದ್ದು, ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...