ಭಾರತೀಯ ಜನತಾ ಪಕ್ಷ ಗುಜರಾತಿನ ಬರೂಚ್ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 31 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಇಷ್ಟು ಸಂಖ್ಯೆಯಲ್ಲಿ ಬಿಜೆಪಿ ಮುಸ್ಲಿಮರನ್ನು ಕಣಕ್ಕಿಳಿಸಿರುವುದು ಇದೇ ಮೊದಲು ಎಂದು ಬರೂಚ್ ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಮಾರುತಿ ಸಿನ್ಹಾ ತಿಳಿಸಿದ್ದಾರೆ.
ಬರೂಚ್ ಜಿಲ್ಲೆಯಲ್ಲಿ ಮುಸ್ಲಿಮರು ಗಣನೀಯ ಸಂಖ್ಯೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ 31 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ ಎಂದು ಹೇಳಲಾಗಿದೆ.ಬಿಜೆಪಿ ಪ್ರಕಟಿಸಿರುವ ಒಟ್ಟು 320 ಅಭ್ಯರ್ಥಿಗಳ ಪೈಕಿ 31 ಮಂದಿ ಮುಸ್ಲಿಂ ಸಮುದಾಯಕ್ಕೆ ಸೇರಿದವರಿದ್ದಾರೆ.
ಪಕ್ಷ ಹೇಳಿದರೆ ವಿಷ ಕುಡಿಯಲೂ ಸಿದ್ಧ ಎಂದ ಡಿಸಿಎಂ ಲಕ್ಷ್ಮಣ ಸವದಿ
ಇದರ ಮಧ್ಯೆ ಭಾರತೀಯ ಟ್ರೈಬಲ್ ಪಾರ್ಟಿ ಹಾಗೂ ಅಸಾದುದ್ದೀನ್ ಓವೈಸಿ ಅವರ ಪಕ್ಷದ ಜೊತೆಗಿನ ಮೈತ್ರಿ ಕಾರಣಕ್ಕೆ ಬಿಜೆಪಿ ಈ ನಿರ್ಧಾರ ಕೈಗೊಂಡಿದೆ ಎಂದು ವಿರೋಧಿಗಳು ಆರೋಪಿಸಿದ್ದು, ಆದರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಾರುತಿ ಸಿನ್ಹಾ ಈ ಆರೋಪವನ್ನು ತಳ್ಳಿಹಾಕಿದ್ದಾರೆ.