alex Certify ಹೈಕೋರ್ಟ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈಕೋರ್ಟ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಸಾವು ನೋವುಗಳು ಸಂಭವಿಸುತ್ತಿರಲು ಚುನಾವಣಾ ಆಯೋಗವೇ ಕಾರಣ ಹಾಗಾಗಿ ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬಹುದು ಎಂದು ಹೇಳಿದ್ದ ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ಆಯೋಗ ಇದೀಗ ಸುಪ್ರೀಂ ಕೊರ್ಟ್ ಮೆಟ್ಟಿಲೇರಿದೆ.

ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ಹೆಚ್ಚುತ್ತಿದ್ದರೂ ನಿಯಮಗಳನ್ನು ಗಾಳಿಗೆ ತೂರಿ ರಾಜಕೀಯ ಪಕ್ಷಗಳು ಸಮಾವೇಶಗಳನ್ನು ನಡೆಸಿ, ಕೊರೊನಾ ಬಿಕ್ಕಟ್ಟು ಇನ್ನಷ್ಟು ಹೆಚ್ಚಾಗಲು ಕಾರಣವಾಗುವಂತೆ ಮಾಡಿದ್ದು ಚುನಾವಣಾ ಆಯೋಗ. ಆಯೋಗದ ಬೇಜವಾಬ್ದಾರಿಯಿಂದಲೇ ದೇಶದಲ್ಲಿ ದುರಂತಗಳು ಹೆಚ್ಚುತ್ತಿದೆ ಎಂದು ಮದ್ರಾಸ್ ಹೈಕೋರ್ಟ್ ಕಿಡಿಕಾರಿತ್ತು. ಅಲ್ಲದೇ ಚುನಾವಣಾ ಆಯೋಗದ ವಿರುದ್ಧ ಕೊಲೆ ಕೇಸ್ ದಾಖಲಿಸಬಹುದು ಎಂದು ಹೇಳಿತ್ತು.

ಕೇರಳದಲ್ಲೂ ಜೆಡಿಎಸ್ ಕಮಾಲ್: ಚಿಟ್ಟೂರಲ್ಲಿ 10 ಸಾವಿರ ಲೀಡ್ – ಬಹುಮತದತ್ತ LDF

ಇದರ ಬೆನ್ನಲ್ಲೇ ಮಾಧ್ಯಮಗಳಲ್ಲಿ ಈ ಸುದ್ದಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ, ಕೋರ್ಟ್ ವಿಚಾರಣೆ ವೇಳೆ ವ್ಯಕ್ತಪಡಿಸಿದ ಅಭಿಪ್ರಾಯವನ್ನೇ ಪ್ರಮುಖವಾಗಿರಿಸಿಕೊಂಡು ಮೌಖಿಕ ಹೇಳಿಕೆಯನ್ನು ವರದಿ ಮಾಡದಂತೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಮೊರೆ ಹೋಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...