ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಂತರ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ನವದೆಹಲಿಯಲ್ಲಿ ನಡೆಯುತ್ತಿರುವ ಸಿಡಬ್ಲ್ಯೂಸಿ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಸ್ಥಾನದ ತಮ್ಮ ಅವಧಿ ಆ.10ರಂದು ಮುಗಿದಿದೆ. ಹೀಗಾಗಿ ಹುದ್ದೆಯಲ್ಲಿ ತಾವು ಮುಂದುವರೆಯುವುದಿಲ್ಲ. ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯುವಂತೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಿದರು. ಆದರೂ ಕೂಡ ಸೋನಿಯಾ ಗಾಂಧಿ ತಮ್ಮ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದು ತಿಳಿಸಿದ್ದಾರೆ.