alex Certify 1 ಲಕ್ಷ ಗಡಿ ದಾಟಿದ ಸಾವಿನ ಸಂಖ್ಯೆ: ದೇಶದಲ್ಲಿ ಹೆಚ್ಚುತ್ತಿದೆ ಕೊರೊನಾ ಅಟ್ಟಹಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1 ಲಕ್ಷ ಗಡಿ ದಾಟಿದ ಸಾವಿನ ಸಂಖ್ಯೆ: ದೇಶದಲ್ಲಿ ಹೆಚ್ಚುತ್ತಿದೆ ಕೊರೊನಾ ಅಟ್ಟಹಾಸ

ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 1 ಲಕ್ಷ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 1,069 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಯಲ್ಲಿ 79,476 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 64,73,545ಕ್ಕೆ ಏರಿಕೆಯಾಗಿದೆ.

ಕಳೆದ ಒಂದೇ ದಿನದಲ್ಲಿ 1,069 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,00,842 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 9,44,996 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 54,27,707 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...