ಭಾರತದಲ್ಲಿ ಮೊದಲ 1 ಕೋಟಿ ಕೊರೊನಾ ಲಸಿಕೆಯನ್ನ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗುತ್ತೆ. ನಂತರದಲ್ಲಿ 2 ಕೋಟಿ ಲಸಿಕೆಯನ್ನ ಅಗತ್ಯ ಸೇವೆಯಲ್ಲಿ ನಿರತರಾಗಿರುವ ಕಾರ್ಮಿಕರಿಗೆ ನೀಡಲಾಗುತ್ತೆ ಅಂತಾ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಈ ಪ್ರಸ್ತುತಿಯನ್ನ ನೀಡಿದ್ರು. ವೈದ್ಯರು ಹಾಗೂ ನರ್ಸ್ಗಳು ಸೇರಿದಂತೆ ಒಟ್ಟು 1 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಮೊದಲು ಕೊರೊನಾ ಲಸಿಕೆ ನೀಡಲಾಗುವುದು ಎಂದು ಸಚಿವಾಲಯ ತನ್ನ ಪ್ರಸ್ತುತಿಯಲ್ಲಿ ಹೇಳಿದೆ.
ಇದಾದ ಬಳಿಕ ಪೊಲೀಸ್ ಇಲಾಖೆ, ಸಶಸ್ತ್ರ ಪಡೆ ಸೇರಿದಂತೆ ಸುಮಾರು 2 ಕೋಟಿ ಮುಂಚೂಣಿ ಕಾರ್ಮಿಕರಿಗೆ ಹಾಗೂ ಪುರಸಭೆ ಕಾರ್ಮಿಕರಿಗೆ ಲಸಿಕೆ ನೀಡಲಾಗುವುದು ಎಂದು ಹೇಳಿದೆ.