ಕೊಟಕ್ ಮಹೀಂದ್ರಾ ಬ್ಯಾಂಕ್ ನಲ್ಲಿ ಕೆಲಸ ಮಾಡಲು ನಿರುದ್ಯೋಗಿಗಳಿಗೆ ಅವಕಾಶ ಸಿಗ್ತಿದೆ. ಕೊಟಕ್ ಮಹೀಂದ್ರಾ ಬ್ಯಾಂಕ್ ನಲ್ಲಿ ಗಾರ್ಡ್ ಹಾಗೂ ಕ್ಲರ್ಕ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 700 ಹುದ್ದೆಗಳ ನೇಮಕಕ್ಕೆ ಬ್ಯಾಂಕ್ ಮುಂದಾಗಿದೆ. ಯೋಗ್ಯ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ.
ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ 10 ಮತ್ತು 12ನೇ ತರಗತಿ ಪಾಸ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನಿಷ್ಠ 18 ವರ್ಷ ವಯಸ್ಸಿನ ಹಾಗೂ ಗರಿಷ್ಠ 40 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್ಲೈನ್ ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ.
ಕೊಟಕ್ ಮಹೀಂದ್ರಾ ಬ್ಯಾಂಕ್ ವೆಬ್ಸೈಟ್ ನಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿದೆ. ಇಲ್ಲಿಯೇ ಅಭ್ಯರ್ಥಿಗಳು ಅರ್ಜಿ ತುಂಬಬೇಕು. ಅರ್ಜಿಗೆ ಯಾವುದೇ ಶುಲ್ಕ ವಿಧಿಸಲಾಗಿಲ್ಲ.