ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, 11 ಜನರು ಸಜೀವ ದಹನಗೊಂಡಿರುವ ಘಟನೆ ತಮಿಳುನಾಡಿನ ವಿರುಧು ನಗರದಲ್ಲಿ ನಡೆದಿದೆ.
ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ಕಾರ್ಖಾನೆ ತುಂಬೆಲ್ಲ ಬೆಂಕಿ ಆವರಿಸಿಕೊಂಡಿದೆ. 11 ಜನರು ಸಾವನ್ನಪ್ಪಿದ್ದು, 22ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಮೃತಪಟ್ಟ 11 ಜನರ ಪೈಕಿ 9 ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ
ಮೃತ ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಮಾಡಲಾಗದ ಸ್ಥಿತಿಯಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂರು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.
ಒಡಿಶಾ ರಾಜ್ಯದಲ್ಲಿರುವ ಹಳ್ಳಿಗಳ ಚುನಾವಣೆಗೆ ದಿನಾಂಕ ಘೋಷಿಸಿತಾ ಆಂಧ್ರ ಸರ್ಕಾರ…?
ಇನ್ನು ಪಟಾಕಿ ಕಾರ್ಖಾನೆ ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಘಟನೆ ತುಂಬಾ ನೋವು ತಂದಿದೆ. ಗಾಯಾಳುಗಳು ಬೇಗನೇ ಗುಣಮುಖರಾಗಲಿ. ಸಂಬಂಧಿಸಿದ ಇಲಾಖೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.