ಉತ್ತರ ಪ್ರದೇಶದಲ್ಲಿ ಕಾನೂನು ವ್ಯವಸ್ಥೆ ಹದಗೆಡುತ್ತಿದೆ. ಅತ್ಯಾಚಾರ ಪ್ರಕರಣಗಳು ಹೆಚ್ಚಾಗ್ತಿವೆ. ಸೀತಾಪುರ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ವಿಡಿಯೋ ವೈರಲ್ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸೀತಾಪುರ ಪೊಲೀಸರು ಎನ್‌ಕೌಂಟರ್ ನಡೆಸಿದ್ದಾರೆ. ಸಾಮೂಹಿಕ ಅತ್ಯಾಚಾರದ ಪ್ರಮುಖ ಆರೋಪಿ ಆಸಿಫ್ ಕಾಲಿಗೆ ಗುಂಡು ಹಾರಿಸಲಾಗಿದೆ. ಎನ್‌ಕೌಂಟರ್‌ನಲ್ಲಿ ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಇನ್ಸ್ಪೆಕ್ಟರ್ ಸಹ ಗಾಯಗೊಂಡಿದ್ದಾರೆ.
ಸಾಮೂಹಿಕ ಅತ್ಯಾಚಾರದ ನಂತರ ಆರೋಪಿಗಳು ಅಶ್ಲೀಲ ವಿಡಿಯೋವನ್ನು ವೈರಲ್ ಮಾಡಿದ್ದಾರೆ ಎನ್ನಲಾಗಿದೆ. ಐದು ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆಂದು ಪೀಡಿತೆ ಹೇಳಿದ್ದಾಳೆ. ಸಂಬಂಧಿಕರು ದೂರು ನೀಡಿದ್ರೂ ಪೊಲೀಸರು ಯಾವುದೇ ಕ್ರಮಕೈಗೊಂಡಿರಲಿಲ್ಲ. ಮಾಧ್ಯಮಗಳ ಒತ್ತಡದ ನಂತ್ರ ದೂರು ದಾಖಲಿಸಿಕೊಂಡಿದ್ದರು ಎನ್ನಲಾಗಿದೆ.