alex Certify ಗೆಳೆಯನೊಂದಿಗಿದ್ದ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೆಳೆಯನೊಂದಿಗಿದ್ದ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಬುಡಕಟ್ಟು ಜನಾಂಗಕ್ಕೆ ಸೇರಿದ 14 ವರ್ಷದ ಬಾಲಕಿಯನ್ನು ನಾಲ್ವರು ಅಪರಿಚಿತರು ಸಾಮೂಹಿಕ ಅತ್ಯಾಚಾರಗೈದ ಘಟನೆ ಛತ್ತೀಸ್‌ಘಡದ ಕಬೀರ್‌ಧಾಮ್ ಜಿಲ್ಲೆಯಲ್ಲಿ ಘಟಿಸಿದೆ.

ಜಿಲ್ಲೆಯ ಪ್ರಧಾನ ಕೇಂದ್ರವಾದ ಕರ್ಧ್ವ ಪಟ್ಟಣದ ಕೋಟ್ವಾಲಿ ಪೊಲೀಸ್ ಠಾಣೆಯ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಂತ್ರಸ್ತೆಯು ತನ್ನ ಸ್ನೇಹಿತನೊಂದಿಗೆ ಹೊರಗೆ ಹೋಗಿದ್ದ ವೇಳೆ ಈ ಘಟನೆ ಜರುಗಿದೆ.

ಖುದ್ದು ಸಂತ್ರಸ್ತೆ ಹೇಳಿದಂತೆ ಅತ್ಯಾಚಾರಿಗಳು ಆಕೆ ಹಾಗೂ ಜೊತೆಗಿದ್ದ ಗೆಳೆಯನ ಅಡ್ಡಗಟ್ಟಿ ಬಳಿಕ ಗೆಳೆಯನಿಗೆ ಕೊಲೆ ಬೆದರಿಕೆಯೊಡ್ಡಿ ಆತ ಅಲ್ಲಿಂದ ಕಾಲ್ಕೀಳುವಂತೆ ಮಾಡಿದ್ದಾರೆ. ಬಳಿಕ ಒಬ್ಬೊಬ್ಬರಾಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ತೆಯ ಆಕ್ರಂದನವನ್ನು ಕೇಳಿದ ಸ್ಥಳೀಯರು ಪೊಲೀಸ್ ಗಸ್ತು ಪಡೆಗೆ ಸುದ್ದಿ ಮುಟ್ಟಿಸಿದ್ದಾರೆ.

ಸಂತ್ರಸ್ತೆ ಕೊಟ್ಟ ಸುಳಿವಿನ ಮೇಲೆ ಅತ್ಯಾಚಾರಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...