ಚೆನ್ನೈ: ತಮಿಳುನಾಡಿನ ನಾಗಪಟ್ಟಣಂನಲ್ಲಿ 14 ವರ್ಷದ ಬಾಲಕಿ ಮೇಲೆ ಕಾಮುಕ ತಂದೆಯೇ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಲಾಕ್ಡೌನ್ ಸಂದರ್ಭದಲ್ಲಿ ತಂದೆಯಿಂದ ಅತ್ಯಾಚಾರಕ್ಕೆ ಒಳಗಾದ ಬಾಲಕಿ ಗರ್ಭಿಣಿಯಾಗಿದ್ದು ಈ ವಿಚಾರ ಗೊತ್ತಾದ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾಮುಕ ತಂದೆಯನ್ನು ಬಂಧಿಸಿದ್ದಾರೆ.
ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಕೆಯನ್ನು ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಪರೀಕ್ಷೆ ನಡೆಸಿದ ವೈದ್ಯರು ಬಾಲಕಿ ಗರ್ಭಿಣಿಯಾದ ಬಗ್ಗೆ ಮಾಹಿತಿ ನೀಡಿದ್ದು ತಾಯಿ ಪ್ರಶ್ನಿಸಿದಾಗ ತಂದೆಯ ನೀಚ ಕೃತ್ಯದ ಬಗ್ಗೆ ಬಾಲಕಿ ಮಾಹಿತಿ ನೀಡಿದ್ದಾಳೆ. ಲಾಕ್ ಡೌನ್ ವೇಳೆ ಮನೆಯಲ್ಲಿ ಮಗಳನ್ನು ಬೆದರಿಸಿ ನಿರಂತರ ಅತ್ಯಾಚಾರ ಎಸಗಿ ಗರ್ಭಿಣಿಯಾಗಲು ಕಾರಣವಾದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.