alex Certify SHOCKING: ತಡರಾತ್ರಿ ರಾಮಲೀಲಾ ನೋಡಿ ಮನೆಗೆ ತೆರಳುತ್ತಿದ್ದ ಹುಡುಗಿ ಎಳೆದೊಯ್ದು ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ತಡರಾತ್ರಿ ರಾಮಲೀಲಾ ನೋಡಿ ಮನೆಗೆ ತೆರಳುತ್ತಿದ್ದ ಹುಡುಗಿ ಎಳೆದೊಯ್ದು ಅತ್ಯಾಚಾರ

ಉತ್ತರಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. ಬಾಂಡಾದ ಅಟಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗುರುವಾರ ತಡರಾತ್ರಿ ನವರಾತ್ರಿ ರಾಮಲೀಲಾ ನೋಡಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ಆರೋಪಿ ಎಳೆದೊಯ್ದು ಇಂತಹ ಕೃತ್ಯವೆಸಗಿದ್ದಾನೆ. ಆರೋಪಿಯನ್ನು 22 ವರ್ಷದ ಅಮರ್ ವರ್ಮಾ ಎಂದು ಗುರುತಿಸಲಾಗಿದೆ.

ಹಳ್ಳಿಯಲ್ಲಿ ರಾಮಲೀಲಾ ನೋಡಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ಬಲವಂತವಾಗಿ ತನ್ನ ಮನೆಗೆ ಕರೆದೊಯ್ದು ಆರೋಪಿ ಅತ್ಯಾಚಾರ ಎಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಟಾರಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಅಖಿಲೇಶ್ ಮಿಶ್ರಾ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...