alex Certify ನವಿಲನ್ನು ಇಡಿಯಾಗಿ ನುಂಗಿದ ಹೆಬ್ಬಾವನ್ನು ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವಿಲನ್ನು ಇಡಿಯಾಗಿ ನುಂಗಿದ ಹೆಬ್ಬಾವನ್ನು ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು

ಭಾರೀ ಗಾತ್ರದ ಹೆಬ್ಬಾವೊಂದು ನವಿಲನ್ನು ಅನಾಮತ್ತಾಗಿ ನುಂಗಿ ಜನರಲ್ಲಿ ಭೀತಿ ಹುಟ್ಟಿಸಿದ ಘಟನೆಯೊಂದು ನಡೆದಿದೆ.

ಹರಿಯಾಣದ ಯಮುನಾ ನಗರ ಜಿಲ್ಲೆಯ ಕಾಡಿನಂಚಿನಲ್ಲಿ ಜಾಂಡಾ ಗ್ರಾಮದಲ್ಲಿ ಹಾವು ನವಿಲನ್ನು ನುಂಗಿರುವುದನ್ನು ನೋಡಿ ಗ್ರಾಮದ ಜನತೆ ಭಯಗೊಂಡಿದ್ದಾರೆ.

ನವಿಲನ್ನು ಹಿಡಿಯುವ ಹೆಬ್ಬಾವು ಅದನ್ನು ಕಾಡಿನೊಳಗೆ ಎಳೆದುಕೊಂಡು ಹೋಗುವುದನ್ನು ನೋಡುತ್ತಿದ್ದಂತೆ ಗ್ರಾಮಸ್ಥರು ಅರಣ್ಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸುದ್ದಿಮುಟ್ಟಿಸಿದ್ದಾರೆ. ನವಿಲನ್ನು ರಕ್ಷಿಸಲು ನಡೆಸಿದ ಪ್ರಯತ್ನ ಕೈಗೂಡಿಲ್ಲ.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ ಈ ಹಾವು 15 ಅಡಿ ಉದ್ದ ಇರಬಹುದೆಂದು ಅಂದಾಜಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...