ಕೇರಳದ ಮಲಪ್ಪುರಂನಲ್ಲಿ ಆಘಾತಕಾರಿ ಘಟನೆ ನಡೆದಿದೆ. 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಕಳೆದ ನಾಲ್ಕು ವರ್ಷಗಳಲ್ಲಿ ನಿರಂತರ ಅತ್ಯಾಚಾರ ನಡೆದಿದೆ. 38 ಜನರು ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ.
ಅಪ್ರಾಪ್ತ ಬಾಲಕಿಯೇ ಈ ವಿಷ್ಯವನ್ನು ಎಲ್ಲರ ಮುಂದಿಟ್ಟಿದ್ದಾಳೆ. ನಿರ್ಭಯಾ ಕೇಂದ್ರದಲ್ಲಿ ಬಾಲಕಿಗೆ ಕೌನ್ಸಿಲಿಂಗ್ ನಡೆಯುತ್ತಿದೆ. 2016ರಲ್ಲಿ 13 ವರ್ಷದ ಬಾಲಕಿ ಮೇಲೆ ಮೊದಲ ಬಾರಿ ಅತ್ಯಾಚಾರವೆಸಗಿದ್ದ. ಇದಾದ ಒಂದು ವರ್ಷಗಳ ನಂತ್ರ ಮತ್ತೆ ಆಕೆ ಮೇಲೆ ಅತ್ಯಾಚಾರ ನಡೆದಿದೆ. ನಂತ್ರ ನಾಲ್ಕು ವರ್ಷಗಳವರೆಗೆ ನಿರಂತರ ಅತ್ಯಾಚಾರ ನಡೆದಿದೆ.
ಬಾಲಕಿ ಮೇಲೆ ಅತ್ಯಾಚಾರವೆಸಗಿದ ಎಲ್ಲರನ್ನೂ ಪೊಲೀಸರು ಬಂಧಿಸಿದ್ದಾರೆ. ಕೇರಳ ಪೊಲೀಸರು ಗಂಭೀರ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಮೇಲೆ ಕಠಿಣ ಕ್ರಮಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.