alex Certify ಓಡಿ ಹೋದ ಹುಡುಗಿ ಅಪಹರಿಸಿ 22 ದಿನ ಕೋಳಿ ಫಾರಂನಲ್ಲಿ ಕೂಡಿಹಾಕಿ ಸಾಮೂಹಿಕ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಓಡಿ ಹೋದ ಹುಡುಗಿ ಅಪಹರಿಸಿ 22 ದಿನ ಕೋಳಿ ಫಾರಂನಲ್ಲಿ ಕೂಡಿಹಾಕಿ ಸಾಮೂಹಿಕ ಅತ್ಯಾಚಾರ

ಪೋಷಕರೊಂದಿಗೆ ಜಗಳವಾಡಿ ಮನೆಯಿಂದ ಓಡಿಹೋಗಿದ್ದ 17 ವರ್ಷದ ಬಾಲಕಿಯನ್ನು ಕೋಳಿ ಫಾರಂನಲ್ಲಿ ಕೂಡಿಹಾಕಿ 22 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಒಡಿಶಾದಲ್ಲಿ ನಡೆದಿದೆ.

ಕಟಕ್ ನಲ್ಲಿ ಕೋಳಿ ಸಾಕಣೆ ಕೇಂದ್ರಕ್ಕೆ ಹುಡುಗಿಯನ್ನು ಕರೆದೊಯ್ದು ಕೂಡಿಹಾಕಿ ಅತ್ಯಾಚಾರ ಎಸಗಲಾಗಿದೆ. ಜಗತ್ ಸಿಂಗ್ ಪುರ್ ಜಿಲ್ಲೆಯ ಟಿರ್ಟಾಲ್ ನಿವಾಸಿಯಾಗಿರುವ ಹುಡುಗಿ ಪೋಷಕರೊಂದಿಗೆ ಜಗಳವಾಡಿ ಮನೆಯಿಂದ ಓಡಿ ಹೋಗಿದ್ದಾಳೆ. ಓಎಂಸಿ ಸ್ಕ್ವೇರ್ ನಲ್ಲಿರುವ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಆಕೆಯನ್ನು ಮನೆಗೆ ಕರೆದುಕೊಂಡು ಹೋಗುವುದಾಗಿ ಭರವಸೆ ನೀಡಿದ್ದಾನೆ.

ಆದರೆ ಟಿರ್ಟಾಲ್ ಗೆ ಹೋಗುವ ಬದಲು ಚೌಲಿಯಾಗಂಜ್ ಪೊಲೀಸ್ ಠಾಣೆ ಪ್ರದೇಶದ ಗತಿರೌಟ್ ಪಾಟ್ನಾ ಗ್ರಾಮದಲ್ಲಿರುವ ಕೋಳಿ ಸಾಕಾಣಿಕೆ ಕೇಂದ್ರಕ್ಕೆ ಕರೆದೊಯ್ದು ಬಲವಂತವಾಗಿ 22 ದಿನ ಕೂಡಿ ಹಾಕಿದ್ದಾರೆ. ಇಬ್ಬರು ಪುರುಷರು ಪದೇಪದೇ ಅತ್ಯಾಚಾರ ಎಸಗಿದ್ದಾರೆ.

ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ದಿಢೀರ್ ದಾಳಿ ನಡೆಸಿ ಹುಡುಗಿಯನ್ನು ರಕ್ಷಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು ಪರಾರಿಯಾಗಿರುವ ಮತ್ತೊಬ್ಬನ ಬಂಧನಕ್ಕೆ ಬಲೆ ಬೀಸಲಾಗಿದೆ. ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ಅನಾಥಾಶ್ರಮಕ್ಕೆ ಕಳುಹಿಸಲಾಗಿದೆ. ಘಟನೆ ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದ್ದು ಪ್ರತಿಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಆಡಳಿತರೂಢ ಬಿಜೆಡಿ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...