
ಒಡಿಶಾದಲ್ಲಿ ತರಬೇತಿ ವಿಮಾನ ಪತನವಾಗಿದ್ದು, ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದಾರೆ. ಬಿಹಾರ ಮತ್ತು ತಮಿಳುನಾಡು ಪೈಲಟ್ ಗಳು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಒಡಿಶಾದ ಧೇಂಕ್ ನಲ್ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ನಡೆದ ದುರಂತದಲ್ಲಿ ತರಬೇತಿ ನಿರತ ಮಹಿಳಾ ಪೈಲಟ್ ಹಾಗೂ ಇನ್ ಸ್ರಕ್ಟರ್ ಸಾವನ್ನಪ್ಪಿದ್ದಾರೆ. ಕಂಕದಾಹದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ತರಬೇತಿ ವೇಳೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ವಿಮಾನ ಪತನವಾಗಿದೆ ಎನ್ನಲಾಗಿದ್ದು, ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.