
12 ವರ್ಷಗಳ ಹಿಂದೆ ಅಂದರೆ 2008ರ ಜುಲೈ 25ರಂದು ಬೆಂಗಳೂರಿನ ಒಂಭತ್ತು ಕಡೆ ಬಾಂಬ್ ಸ್ಫೋಟ ನಡೆಸಿದ್ದ ಆರೋಪಿಯನ್ನು ಕೊನೆಗೂ ಬಂಧಿಸಲಾಗಿದೆ. ದುಬೈನಲ್ಲಿ ತಲೆಮರೆಸಿಕೊಂಡಿದ್ದ ಶೋಯಬ್ ಬಂಧಿತ ಆರೋಪಿ.
ಕೇರಳದ ಕಣ್ಣೂರು ಮೂಲದ ಶೋಯೆಬ್ ಸೋಮವಾರದಂದು ದುಬೈನಿಂದ ಬರುತ್ತಿರುವ ಮಾಹಿತಿ ಪಡೆದಿದ್ದ ಸಿಸಿಬಿ ಅಧಿಕಾರಿಗಳು ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಆತನನ್ನು ಬಂಧಿಸಿದ್ದಾರೆ.
ಆರೋಪಿ ತನ್ನ ಸಹಚರರ ಜೊತೆಗೂಡಿ 2008ರ ಜುಲೈ 25ರಂದು ಮಡಿವಾಳ, ಮೈಸೂರು ರಸ್ತೆ, ಆಡುಗೋಡಿ, ಕೋರಮಂಗಲ, ವಿಠ್ಠಲ್ ಮಲ್ಯ ರಸ್ತೆಯಲ್ಲಿ ಬಾಂಬ್ ಸ್ಪೋಟ ನಡೆಸಿದ್ದು, ಈ ಸಂದರ್ಭದಲ್ಲಿ ಮಡಿವಾಳ ಬಸ್ ಶೆಲ್ಟರ್ ನಲ್ಲಿ ನಿಂತಿದ್ದ ಮಹಿಳೆಯೊಬ್ಬರು ಬಲಿಯಾಗಿದ್ದರು.