alex Certify 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೋವಿಡ್ ಸೋಂಕಿತರೆಷ್ಟು…? ಡಿಸ್ಚಾರ್ಜ್ ಆದವರೆಷ್ಟು….? ಇಲ್ಲಿದೆ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೋವಿಡ್ ಸೋಂಕಿತರೆಷ್ಟು…? ಡಿಸ್ಚಾರ್ಜ್ ಆದವರೆಷ್ಟು….? ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 15,223 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,06,10,883ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 151 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,52,869ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,92,308 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,02,65,706 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 19,965 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 8,06,484 ಜನರಿಗೆ ವ್ಯಾಕ್ಸಿನ್ ಹಾಕಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...