alex Certify 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೋವಿಡ್ ಪ್ರಕರಣಗಳೆಷ್ಟು ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೋವಿಡ್ ಪ್ರಕರಣಗಳೆಷ್ಟು ಗೊತ್ತಾ….?

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 67,708 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 73,07,098 ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 680 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,11,266ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 8,12,390 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 63,83,442 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 11,36,183 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 9,12,26,305 ಜನರನ್ನು ಕೊವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ಐಸಿಎಂ ಆರ್ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...