ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,488 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,10,79,979ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 113 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,56,938ಕ್ಕೆ ಏರಿಕೆಯಾಗಿದೆ.
ಪ್ರಯಾಣಿಕರ ಗಮನಕ್ಕೆ – ನಾಳೆ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ
ಇನ್ನು ದೇಶದಲ್ಲಿ 1,59,590 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,07,63,451 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 12,771 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ದೇಶದಲ್ಲಿ ಈವರೆಗೆ 1,42,42,547 ಜನರಿಗೆ ಲಸಿಕೆ ಹಾಕಲಾಗಿದೆ.