alex Certify 24 ಗಂಟೆಯಲ್ಲಿ 12,771 ಜನರು ಡಿಸ್ಚಾರ್ಜ್ – ಒಂದೇ ದಿನದಲ್ಲಿ 16 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

24 ಗಂಟೆಯಲ್ಲಿ 12,771 ಜನರು ಡಿಸ್ಚಾರ್ಜ್ – ಒಂದೇ ದಿನದಲ್ಲಿ 16 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,488 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,10,79,979ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 113 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,56,938ಕ್ಕೆ ಏರಿಕೆಯಾಗಿದೆ.

 ಪ್ರಯಾಣಿಕರ ಗಮನಕ್ಕೆ – ನಾಳೆ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ

ಇನ್ನು ದೇಶದಲ್ಲಿ 1,59,590 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,07,63,451 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 12,771 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಈವರೆಗೆ 1,42,42,547 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...