ಶ್ರೀನಗರ: ಉಗ್ರರ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಯೋಧರು ಹುತಾತ್ಮರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ನಡೆದಿದೆ.
ಉಗ್ರರು ನಡೆಸಿದ ದಾಳಿಯಲ್ಲಿ ಯೋಧರು ಹುತಾತ್ಮರಾಗಿದ್ದು ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಓರ್ವ ಉಗ್ರನನ್ನು ಹೊಡೆದುರುಳಿಸಿದೆ.
ಹಂದ್ವಾರ ಪ್ರದೇಶದಲ್ಲಿ ಉಗ್ರರು ಅವಿತಿರುವ ಮಾಹಿತಿ ಪಡೆದ ಭಾರತೀಯ ಸೇನೆ ನಿರಂತರ ಕಾರ್ಯಾಚರಣೆ ಕೈಗೊಂಡಿದ್ದು, ಈ ವೇಳೆ ಉಗ್ರರು ನಡೆಸಿದ ದಾಳಿಯಲ್ಲಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ ಎನ್ನಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಹಂದ್ವಾರದಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಕರ್ನಲ್, ಮೇಜರ್ ಸೇರಿ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾದ ಘಟನೆ ಬೆನ್ನಲ್ಲೇ ಈ ಘಟನೆ ಮರುಕಳಿಸಿದೆ.