alex Certify 30 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

30 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದ್ದು, 30 ಲಕ್ಷದ ಗಡಿ ದಾಟಿದೆ. ಕಳೆದ 24ಗಂಟೆಯಲ್ಲಿ ದೇಶದಲ್ಲಿ 69,239 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,44,941ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 912 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಮಹಾಮಾರಿ ವೈರಸ್ ಗೆ ಬಲಿಯಾದವರ ಸಂಖ್ಯೆ 56,706ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ದೇಶದಲ್ಲಿ ಈವರೆಗೆ 22,80,567 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 7,07,668 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...