alex Certify 42 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

42 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 90,802 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 42 ಲಕ್ಷ ಗಡಿದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದೇ ದಿನ 90,802 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 42,04,613ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಕಳೆದ 24 ಗಂಟೆಗಳಲ್ಲಿ 1016 ಜನ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 71,642ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 32 ಲಕ್ಷ ಜನರು ಕೊವಿಡ್ ನಿಂದ ಗುಣಮುಖರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...