ಜೈಪುರದಲ್ಲಿ ತಲೆ ತಗ್ಗಿಸುವ ಘಟನೆ ನಡೆದಿದೆ. ಐದು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಬರಾನ್ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿದ್ದಾರೆ.
ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದ ನೆರೆಯ ಮೂವರು ಅಪ್ರಾಪ್ತರು 5 ರೂಪಾಯಿ ನೀಡುವುದಾಗಿ ಆಸೆ ತೋರಿಸಿದ್ದಾರೆ. ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ.
ಘಟನೆ ವೇಳೆ ಬಾಲಕಿ ತಾಯಿ ಮನೆಯಲ್ಲಿ ಅಡುಗೆ ಮಾಡ್ತಿದ್ದಳಂತೆ. ತುಂಬಾ ಸಮಯ ಮಗಳು ಕಾಣದ ಕಾರಣ ಹುಡುಕಾಟ ಶುರು ಮಾಡಿದ್ದಾರೆ. ಮನೆ ಪಕ್ಕದ ನಿರ್ಜನ ಪ್ರದೇಶದಲ್ಲಿ ಮಗುವಿನ ಅಳು ಕೇಳಿಸಿದೆ. ಮಗುವಿನ ಸ್ಥಿತಿ ನೋಡಿ ಕಂಗಾಲಾದ ಕುಟುಂಬಸ್ಥರು ವೈದ್ಯರ ಬಳಿ ಕರೆದೊಯ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದು, ಪತ್ತೆ ಕಾರ್ಯ ನಡೆಯುತ್ತಿದೆ.