alex Certify ಮದ್ಯದ ಅಮಲಲ್ಲಿ ಕಾಮುಕನಿಂದ ಹೇಯಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯದ ಅಮಲಲ್ಲಿ ಕಾಮುಕನಿಂದ ಹೇಯಕೃತ್ಯ

ಜೈಪುರ್: ರಾಜಸ್ತಾನದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಯುವಕನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು ಆಕೆಯ ಸ್ಥಿತಿ ಗಂಭೀರವಾಗಿದೆ.

ರಾಜಸ್ತಾನದ ಬರನ್ ಜಿಲ್ಲೆಯ ಶಹಾಬಾದ್ ಪ್ರದೇಶದಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದೆ. ಬಾಲಕಿಗೆ ತೀವ್ರ ರಕ್ತಸ್ರಾವವಾಗಿದ್ದು, ಪೋಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೋಟದಲ್ಲಿರುವ ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಗೆ ಒಂದು ಸರ್ಜರಿ ನಡೆದಿದ್ದು ಮತ್ತೆ ಎರಡು ಸರ್ಜರಿ ಮಾಡಬೇಕಿದೆ.

ಮಂಗಳವಾರ ಸಂಜೆ 5 ಗಂಟೆ ವೇಳೆಯಲ್ಲಿ ಮೂತ್ರವಿಸರ್ಜನೆಗೆ ಮನೆಯಿಂದ ಹೊರಗೆ ಹೋಗಿದ್ದ ಬಾಲಕಿಯನ್ನು ಮದ್ಯದ ನಶೆಯಲ್ಲಿದ್ದ ಯುವಕ ಹಲ್ಲೆ ಮಾಡಿ ಕಟ್ಟಡವೊಂದರ ಬಳಿಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಠಾಣಾಧಿಕಾರಿ ಹರಿಪ್ರಸಾದ್ ರಾಣಾ ಹೇಳಿದ್ದಾರೆ.

ತನ್ನ ಮೇಲೆ ಅತ್ಯಾಚಾರವಾಗಿರುವುದನ್ನು ಅರಿಯದ ಕಂದಮ್ಮ ಅಳುತ್ತಲೇ ಮನೆಗೆ ಬಂದಿದ್ದು ತೀವ್ರ ರಕ್ತಸ್ರಾವವಾಗಿರುವುದನ್ನು ಗಮನಿಸಿದ ತಾಯಿ ಗಾಬರಿಯಾಗಿದ್ದಾರೆ. ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...