alex Certify 59,88,823 ಸೋಂಕಿತರು ಗುಣಮುಖ: 24 ಗಂಟೆಯಲ್ಲಿ ಪತ್ತೆಯಾದ ಕೋವಿಡ್ ಕೇಸ್ ಗಳು ಎಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

59,88,823 ಸೋಂಕಿತರು ಗುಣಮುಖ: 24 ಗಂಟೆಯಲ್ಲಿ ಪತ್ತೆಯಾದ ಕೋವಿಡ್ ಕೇಸ್ ಗಳು ಎಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 73,272 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇದೀಗ 69,79,424ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 926 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,07,416ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 8,83,185 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 59,88,823 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ಒಂದೇ ದಿನ 11,64,018 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ಈವರೆಗೆ ದೇಶದಲ್ಲಿ 8,57,98,698 ಜನರಿಗೆ ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿ ಎಂದು ಐಸಿಎಂ ಆರ್ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...