alex Certify 69 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ: ದೇಶದಲ್ಲಿ ಹೆಚ್ಚುತ್ತಿದೆ ಮಹಾಮಾರಿ ಅಟ್ಟಹಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

69 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ: ದೇಶದಲ್ಲಿ ಹೆಚ್ಚುತ್ತಿದೆ ಮಹಾಮಾರಿ ಅಟ್ಟಹಾಸ

ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 69 ಲಕ್ಷ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 70,496 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇದೀಗ 69,06,152ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 964 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,06,490ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 8,93,592 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 59,06,070 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...