alex Certify 70 ಲಕ್ಷ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

70 ಲಕ್ಷ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 74,383 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 70 ಲಕ್ಷ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇದೀಗ 70,53,807 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 918 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,08,334ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 8,67,496 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 60,77,977 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ಒಂದೇ ದಿನ 10,78,544 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ಈವರೆಗೆ ದೇಶದಲ್ಲಿ 8,68,77,242 ಜನರಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...