alex Certify ಚಿತೆಗೆ ಬೆಂಕಿ ಹಚ್ಚುವ ವೇಳೆ ಎದ್ದು ಕುಳಿತ ಕೊರೊನಾ ಸೋಂಕಿತ ಮಹಿಳೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತೆಗೆ ಬೆಂಕಿ ಹಚ್ಚುವ ವೇಳೆ ಎದ್ದು ಕುಳಿತ ಕೊರೊನಾ ಸೋಂಕಿತ ಮಹಿಳೆ…!

ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಇಳಿಮುಖವಾಗ್ತಿದೆ. ಆದ್ರೆ ಸಾವಿನ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾಗೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಒಂದೇ ಕುಟುಂಬದ ನಾಲ್ಕರಿಂದ ಐದು ಮಂದಿ ಸಾವನ್ನಪ್ಪಿದ ಘಟನೆಯೂ ಇದೆ. ಈ ಮಧ್ಯೆ ಪುಣೆಯಲ್ಲಿ ವಿಚಿತ್ರ ಘಟನೆ ನಡೆದಿದೆ. ಅಂತ್ಯಕ್ರಿಯೆ ವೇಳೆ ಮಹಿಳೆ ಎದ್ದು ಕುಳಿತ ಪ್ರಕರಣ ನಡೆದಿದೆ.

ಪುಣೆಯ 78 ವರ್ಷದ ಶಕುಂತಲಾಗೆ ಕೊರೊನಾ ಕಾಣಿಸಿಕೊಂಡಿತ್ತು. ಮನೆಯಲ್ಲಿಯೇ ಶಕುಂತಲಾಗೆ ಚಿಕಿತ್ಸೆ ನಡೆಯುತ್ತಿತ್ತು. ಆದ್ರೆ ಆರೋಗ್ಯ ಹದಗೆಟ್ಟ ಕಾರಣ ಆಕೆಯನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಬೆಡ್ ಖಾಲಿಯಿಲ್ಲದ ಕಾರಣ ಆಂಬ್ಯುಲೆನ್ಸ್ ನಲ್ಲಿ ಆಕೆಯನ್ನು ಮಲಗಿಸಲಾಗಿತ್ತು. ಈ ವೇಳೆ ಆಕೆ ಪ್ರಜ್ಞೆ ತಪ್ಪಿದೆ.

ಪರೀಕ್ಷಿಸಿದ ಆಂಬ್ಯುಲೆನ್ಸ್ ಸಿಬ್ಬಂದಿ, ಶಕುಂತಲಾ ಸಾವನ್ನಪ್ಪಿದ್ದಾಳೆ ಎಂದಿದ್ದಾರೆ. ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದ್ದಾರೆ. ತೋಟದಲ್ಲಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆಯಾಗಿದೆ. ಚಿತೆಗೆ ಬೆಂಕಿ ಹಚ್ಚಬೇಕೆನ್ನುವ ಸಂದರ್ಭದಲ್ಲಿ ಶಕುಂತಲಾ ಎದ್ದು ಕುಳಿತಿದ್ದಾಳೆ. ಅಳಲು ಶುರು ಮಾಡಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...