ರಾಜಸ್ತಾನದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆಗಳು ನಿಲ್ಲುವಂತೆ ಕಾಣ್ತಿಲ್ಲ. ಈಗ ಚುರು ಜಿಲ್ಲೆಯಲ್ಲಿ 19 ವರ್ಷದ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಸಾಮೂಹಿಕ ಅತ್ಯಾಚಾರ ಘಟನೆಯಲ್ಲಿ 9 ಯುವಕರು ಭಾಗಿಯಾಗಿದ್ದಾರೆ ಎನ್ನಲಾಗಿದೆ.
ರಾಜ್ಗಢ್, ಜೈಪುರ ಮತ್ತು ಸಿಕಾರ್ನಲ್ಲಿ 8 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಪೀಡಿತೆ ರಾಜ್ ಗಢ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾಳೆ. ಆಕೆ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬ ಪೀಡಿತೆ ಪರಿಚಯಸ್ತ ಎನ್ನಲಾಗಿದೆ. ಸರ್ಕಾರಿ ಕೆಲಸಕ್ಕೆ ಫಾರ್ಮ್ ತುಂಬಿಸುವ ನೆಪ ಹೇಳಿ ಯುವಕ ಪೀಡಿತೆಯನ್ನು ಕರೆದುಕೊಂಡು ಹೋಗಿದ್ದನಂತೆ.
ರಾಜ್ ಗಢ್ ಮನೆಯೊಂದರಲ್ಲಿ ನಾಲ್ವರು ಅತ್ಯಾಚಾರವೆಸಗಿದ್ದಾರೆ. ಅಶ್ಲೀಲ ವಿಡಿಯೋ ಹಾಗೂ ಫೋಟೋ ತೆಗೆದು ಬ್ಲಾಕ್ಮೇಲ್ ಮಾಡಿದ್ದಾರೆ. ನಂತ್ರ ಜೈಪುರ ಹೊಟೇಲ್ ಗೆ ಕರೆದು ಅತ್ಯಾಚಾರವೆಸಗಿದ್ದಾರೆ. ನಂತ್ರ ಹಳ್ಳಿಗೆ ಕರೆದೊಯ್ಯಲಾಗಿದೆ. ಅಲ್ಲಿ ಮತ್ತೆ ಅತ್ಯಾಚಾರವೆಸಗಲಾಗಿದೆ. ನಂತ್ರ ಪೊಲೀಸರು ಯುವತಿಯನ್ನು ರಕ್ಷಿಸಿದ್ದಾರೆ. ಬೆದರಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾರೆ. ಯುವತಿ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ.