
ಲಖ್ನೋ: ದುಷ್ಕರ್ಮಿಗಳಿಂದ ನಡೆದ ಫೈರಿಂಗ್ ನಲ್ಲಿ 8 ಪೊಲೀಸರು ಹುತಾತ್ಮರಾದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಬಂಧಿಸಲು ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. 12 ಪೊಲೀಸರು ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ.
60 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿರುವ ಗ್ಯಾಂಗ್ ಸ್ಟರ್ ವಿಕಾಸ ದುಬೆ ಬಂಧನಕ್ಕೆ ಪೊಲೀಸರು ತೀವ್ರ ಶೋಧ ನಡೆಸಿದ್ದರು. ಮಾಹಿತಿ ಮೇರೆಗೆ ಆತನ ಬಂಧನಕ್ಕೆ ತೆರಳಿದ್ದ ವೇಳೆ ಫೈರಿಂಗ್ ಮಾಡಲಾಗಿದೆ.