alex Certify 80 ಲಕ್ಷ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ; ದೇಶದಲ್ಲಿರುವ ಸಕ್ರಿಯ ಪ್ರಕರಣಗಳು ಎಷ್ಟು ಗೊತ್ತೇ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

80 ಲಕ್ಷ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ; ದೇಶದಲ್ಲಿರುವ ಸಕ್ರಿಯ ಪ್ರಕರಣಗಳು ಎಷ್ಟು ಗೊತ್ತೇ…?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 49,881 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 80,40,203ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 517 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,20,527ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 6,03,687 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಯಲ್ಲಿ 56,480 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ದೇಶದಲ್ಲಿ 73,15,989 ಸೋಂಕಿತರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...