ಭಾರತೀಯ ರೈಲ್ವೆ ಸೆಪ್ಟೆಂಬರ್ 12 ರಿಂದ 80 ವಿಶೇಷ ರೈಲುಗಳ ಓಡಾಟ ಶುರು ಮಾಡಲಿದೆ. ಸೆಪ್ಟೆಂಬರ್ 10 ರಿಂದ ಹೊಸ ವಿಶೇಷ ರೈಲುಗಳ ಬುಕಿಂಗ್ ಪ್ರಾರಂಭವಾಗಿದೆ. ಈ ಎಲ್ಲಾ 80 ರೈಲುಗಳಿಗೆ ಕೆಲವೊಂದು ನಿಯಮಗಳನ್ನು ಕಡ್ಡಾಯಗೊಳಿಸಲಾಗಿದೆ. ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ಅದರಲ್ಲಿ ಪ್ರಯಾಣಿಸಲು ಅವಕಾಶವಿರುತ್ತದೆ.
ವೇಟಿಂಗ್ ಲೀಸ್ಟ್ ನಲ್ಲಿರುವ ಪ್ರಯಾಣಿಕರಿಗೆ ಈ ರೈಲುಗಳಲ್ಲಿ ಪ್ರಯಾಣಿಸಲು ಅವಕಾಶವಿಲ್ಲ. ಪ್ರಯಾಣಿಕರು ಈ ರೈಲುಗಳಲ್ಲಿ ಪ್ರಯಾಣಿಸಲು ಟಿಕೆಟ್ ಕಾಯ್ದಿರಿಸುವಿಕೆ ಕಡ್ಡಾಯವಾಗಿದೆ. ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಪ್ರಯಾಣಿಕರು ಟಿಕೆಟ್ ಕಾಯ್ದಿರಿಸಬಹುದಾಗಿದೆ.
ಆನ್ಲೈನ್ ನಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಬಯಸುವವರು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಆಯ್ಕೆ ಮಾಡಬಹುದು. ಪಾವತಿಯ ನಂತರ, ನೀವು ಟಿಕೆಟ್ ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ. ನಿಮ್ಮ ಫೋನ್ ಸಂಖ್ಯೆಗೆ ಎಸ್ಎಂಎಸ್ ಬರುತ್ತದೆ. ಇದು ಇದ್ದಲ್ಲಿ ಮಾತ್ರ ನೀವು ಪ್ರಯಾಣ ಬೆಳೆಸಬಹುದು.
ಪ್ರಯಾಣಿಕರಿಗೆ ಆರೋಗ್ಯ ಸೇತು ಅಪ್ಲಿಕೇಷನ್ ಕಡ್ಡಾಯವಾಗಿದೆ. ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿದೆ. ಯಾವುದೇ ಕಂಬಳಿ, ದಿಂಬುಗಳನ್ನು ರೈಲ್ವೆ ಇಲಾಖೆ ಒದಗಿಸುವುದಿಲ್ಲ.