alex Certify ಮದುವೆಯಾಗದೆ ತಾಯಿಯಾದ ಅಪ್ರಾಪ್ತೆ ಮಾಡಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾಗದೆ ತಾಯಿಯಾದ ಅಪ್ರಾಪ್ತೆ ಮಾಡಿದ್ದೇನು…?

बिना शादी के मां बनी 17 साल की लड़की, ऑपरेशन थिएटर में ही लगा ली फांसी

ಮದುವೆಯಾಗದೆ 17 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಯಾದ ನಂತ್ರ ಆಪರೇಷನ್ ಥಿಯೇಟರ್ ನಲ್ಲಿಯೇ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗು ಆರೋಗ್ಯವಾಗಿದೆ. ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ.

ಖಾಸಗಿ ಆಸ್ಪತ್ರೆಗೆ ಮಂಗಳವಾರ ರಾತ್ರಿ ಬಂದ ಬಾಲಕಿಯನ್ನು ವೈದ್ಯರು ದಾಖಲಿಸಿಕೊಂಡು ಹೆರಿಗೆ ಮಾಡಿಸಿದ್ದಾರೆ. ನಂತ್ರ ಅಲ್ಲಿಯೇ ನರ್ಸ್ ಇದ್ದರು ಎನ್ನಲಾಗಿದೆ. ನರ್ಸ್ ಗೆ ನೀರು ತರುವಂತೆ ಹೇಳಿದ ಬಾಲಕಿ ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿ ಕುಟುಂಬಸ್ಥರನ್ನು ಪತ್ತೆ ಮಾಡಿ ಶವ ಹಸ್ತಾಂತರಿಸಲಾಗಿದೆ. ಕುಟುಂಬಸ್ಥರಿಗೆ ಬಾಲಕಿ ಗರ್ಭಿಣಿ ಎಂಬುದು ಗೊತ್ತಿರಲಿಲ್ಲವಂತೆ.

ಅಪ್ರಾಪ್ತೆಗೆ ಗ್ರಾಮದ ಯುವಕನ ಜೊತೆ ಪ್ರೇಮ ಸಂಬಂಧವಿತ್ತು ಎನ್ನಲಾಗಿದೆ. ಪೊಲೀಸರು ಯುವಕನ ಪತ್ತೆ ಕಾರ್ಯ ಶುರು ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...