alex Certify ಅಶ್ಲೀಲ ವಿಡಿಯೋ ತೋರಿಸಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಪತ್ರಿಕೆ ಮಾಲೀಕ ಅರೆಸ್ಟ್: ದಾಳಿ ವೇಳೆ ಸಿಡಿ, ಪೆನ್ ಡ್ರೈವ್ ವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಶ್ಲೀಲ ವಿಡಿಯೋ ತೋರಿಸಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಪತ್ರಿಕೆ ಮಾಲೀಕ ಅರೆಸ್ಟ್: ದಾಳಿ ವೇಳೆ ಸಿಡಿ, ಪೆನ್ ಡ್ರೈವ್ ವಶ

ಭೋಪಾಲ್: ಭೋಪಾಲ್ ಮೂಲದ ಪತ್ರಿಕೆ ಮಾಲೀಕನನ್ನು ಅತ್ಯಾಚಾರ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ದಿನವಷ್ಟೇ ಆತನಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದು ಅಶ್ಲೀಲ ಸಿಡಿ, ಐಷಾರಾಮಿ ಕಾರುಗಳು, ಮದ್ಯದ ಬಾಟಲಿ, ಕಾಡು ಪ್ರಾಣಿಗಳ ಮೂಳೆಗಳನ್ನು ವಶಕ್ಕೆ ಪಡೆಯಲಾಗಿದೆ, 68 ವರ್ಷದ ಪ್ಯಾರೆ ಮಿಯಾನ್ ಬಂಧಿತ ಆರೋಪಿ.

ಐವರು ಬಾಲಕಿಯರು ಮತ್ತು ಮಹಿಳೆ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಆತನನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಭೋಪಾಲ್ ದಕ್ಷಿಣ ಪೊಲೀಸ್ ವರಿಷ್ಠಾಧಿಕಾರಿ ಸಾಯಿಕೃಷ್ಣ ಥೋಟಾ ತಿಳಿಸಿದ್ದಾರೆ.

ಮಿಯಾನ್ ಶ್ರೀನಗರದಲ್ಲಿರುವ ಮಾಹಿತಿ ಪಡೆದು ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಬಂಧಿಸಲಾಗಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ(ಪೋಕ್ಸೋ), ಅಬಕಾರಿ ಕಾಯ್ದೆ, ವನ್ಯಜೀವಿ ಕಾಯ್ದೆ, ಅತ್ಯಾಚಾರ ಪ್ರಕರಣ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಕೇಸ್ ದಾಖಲಿಸಲಾಗಿದೆ.

ಅಶ್ಲೀಲ ಫೋಟೋ, ವಿಡಿಯೋಗಳು ಇದ್ದ ಸಿಡಿ, ಡಿವಿಡಿ, ಪೆನ್ ಡ್ರೈವ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಮಕ್ಕಳಿಗೆ ಅಶ್ಲೀಲ ವೀಡಿಯೋ ತೋರಿಸಿ ಅತ್ಯಾಚಾರ ಎಸಗಿರುವ ಆರೋಪವಿದ್ದು ಅಪ್ರಾಪ್ತ ಬಾಲಕಿಯರು ಮತ್ತು ಮಹಿಳೆ ದೂರು ದಾಖಲಿಸಿದ್ದಾರೆ ಎಂದು ಥೋಟಾ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...