alex Certify BREAKING: ಭೀಕರ ಅಪಘಾತದಲ್ಲಿ ಡೀಸೆಲ್ ಟ್ಯಾಂಕ್ ಸ್ಪೋಟಿಸಿ ಬೆಂಕಿ, ನಾಲ್ವರು ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಅಪಘಾತದಲ್ಲಿ ಡೀಸೆಲ್ ಟ್ಯಾಂಕ್ ಸ್ಪೋಟಿಸಿ ಬೆಂಕಿ, ನಾಲ್ವರು ಸಜೀವ ದಹನ

ಹೈದರಾಬಾದ್: ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಜೀವ ದಹನವಾದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ವಲ್ಲೂರು ತಾಲೂಕಿನ ಗೋಟೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಟಿಪ್ಪರ್ ಲೋಡ್ ಮಾಡಿ ರಸ್ತೆಗೆ ಬಂದ ವೇಳೆ ಟಾಟಾ ಸುಮೋ ಡಿಕ್ಕಿ ಹೊಡೆದಿದೆ. ಟಿಪ್ಪರ್ ಲಾರಿ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿದ್ದು, ಟಾಟಾ ಸುಮೋದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.

ಸ್ಥಳದಲ್ಲೇ ಮೃತಪಟ್ಟ ನಾಲ್ವರು ತಮಿಳುನಾಡು ಮೂಲದವರು ಎನ್ನಲಾಗಿದ್ದು, ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಕಡಪ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...