ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ನಿಯಂತ್ರಣ ಹೇಗೆ ಎಂಬ ಪ್ರಶ್ನೆ ಎಲ್ಲರಲ್ಲೂ ಮನೆ ಮಾಡಿದೆ. ಈ ಸಂದರ್ಭದಲ್ಲಿ ಅಮೆರಿಕದ ಉನ್ನತ ಆರೋಗ್ಯ ತಜ್ಞ ಡಾ. ಆಂಥೋನಿ ಫೌಚಿ, ಭಾರತದಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಉಪಾಯ ಹೇಳಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಲಸಿಕೆ ಸಾಂಕ್ರಾಮಿಕ ಯುದ್ಧದ ಅಸ್ತ್ರವೆಂದು ಬಣ್ಣಿಸಿದ್ದಾರೆ.
ಭಾರತ ಮತ್ತು ಅಮೆರಿಕಾದಲ್ಲಿ ಕೊರೊನಾ ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ, ವ್ಯಾಕ್ಸಿನೇಷನ್ ಮಾತ್ರ ಶಾಶ್ವತ ಪರಿಹಾರವಾಗಿದೆ ಎಂದು ಅವರು ಹೇಳಿದ್ದಾರೆ. ಕೊರೊನಾ ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಪಡೆಯುವುದು ಬಹಳ ಮುಖ್ಯವೆಂದು ಅವರು ಹೇಳಿದ್ದಾರೆ. ಭಾರತವು ಪ್ರಸ್ತುತ ವಿಶ್ವದಲ್ಲೇ ಅತಿ ಹೆಚ್ಚು ಲಸಿಕೆಗಳನ್ನು ತಯಾರಿಸುತ್ತಿದೆ ಎಂದವರು ಹೇಳಿದ್ದಾರೆ.
ಭಾರತಕ್ಕೆ ಲಸಿಕೆ ಒದಗಿಸುವಲ್ಲಿ ಸಹಾಯ ಮಾಡಿ ಎಂದು ಬೇರೆ ದೇಶಗಳಿಗೆ ಫೌಚಿ ಹೇಳಿದ್ದಾರೆ. ಇದರಿಂದ ಹೆಚ್ಚಿನ ಜನರಿಗೆ ಲಸಿಕೆ ಹಾಕಬಹುದು. ಆಸ್ಪತ್ರೆಯಲ್ಲಿ ಹಾಸಿಗೆ ಕೊರತೆಯಿಂದ ಜನರನ್ನು ಬೀದಿಯಲ್ಲಿರಿಸಲು ಸಾಧ್ಯವಿಲ್ಲ. ಭಾರತದಲ್ಲಿ ಆಮ್ಲಜನಕದ ಪರಿಸ್ಥಿತಿ ನಿಜವಾಗಿಯೂ ಗಂಭೀರವಾಗಿದೆ ಎಂದವರು ಹೇಳಿದ್ದಾರೆ. ಕೊರೊನಾ ಹೆಚ್ಚಾಗ್ತಿರುವ ಹಿನ್ನಲೆಯಲ್ಲಿ ಭಾರತದಲ್ಲಿ ತಾತ್ಕಾಲಿಕ ಲಾಕ್ಡೌನ್ ಮಾಡುವಂತೆ ಈ ಹಿಂದೆ ಫೌಚಿ ಸಲಹೆ ನೀಡಿದ್ದರು.