
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ನಟಿ ಮಿಷ್ತಿ ಮುಖರ್ಜಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಪೋಷಕರು, ಸಹೋದರ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದು, ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು.
2020 ರಲ್ಲಿ ಭಾರತೀಯ ಚಿತ್ರರಂಗದಲ್ಲಿ ಸುಶಾಂತ್ ಸಿಂಗ್ ರಜಪೂತ್, ಇರ್ಫಾನ್ ಖಾನ್, ರಿಷಿ ಕಪೂರ್ ಸೇರಿದಂತೆ ಅನೇಕ ಖ್ಯಾತನಾಮರ ಸಾವು-ನೋವಾಗಿದ್ದು, ಚಿತ್ರರಂಗಕ್ಕೆ ಸಾಕಷ್ಟು ನಷ್ಟ ಉಂಟಾಗಿದೆ.
ಇದೀಗ ಮಿಷ್ತಿ ಮುಖರ್ಜಿ ಸಾವು ಆಘಾತ ತಂದಿದ್ದು, ಕಳೆದ ಕೆಲ ತಿಂಗಳಿಂದ ಅವರು ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಾಲಿ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು, ಮೇ ಕೃಷ್ಣ ಹೂ, ಲೈಫ್ ಕಿ ತೋ ಲಗ್ ಗಹಿ ಹೀಗೆ ಅನೇಕ ಸಿನಿಮಾಗಳ ಮೂಲಕ ಬಾಲಿವುಡ್ ಪ್ರವೇಶಿಸಿದ್ದರು.