
ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದರ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಬಹಿರಂಗವಾಗಿಯೇ ಹೊಗಳಿದ್ದ ಶಾಸಕನನ್ನು ಡಿಎಂಕೆ ಪಕ್ಷ ಅಮಾನತು ಮಾಡಿದೆ.
ಡಿಎಂಕೆ ಶಾಸಕ ಸೆಲ್ವಂ ಅಮಾನತುಗೊಂಡವರಾಗಿದ್ದು, ಇವರು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ವೈಖರಿಯನ್ನು ಕೊಂಡಾಡಿದ್ದಲ್ಲದೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಸಹ ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಈ ಬೆಳವಣಿಗೆ ಡಿಎಂಕೆ ನಾಯಕರ ಕಣ್ಣು ಕೆಂಪಗಾಗಿಸಿದ್ದು, ಸ್ಪಷ್ಟನೆ ನೀಡುವಂತೆ ಸೆಲ್ವಂ ಅವರಿಗೆ ಶೋಕಾಸ್ ನೋಟೀಸ್ ನೀಡಲಾಗಿತ್ತು. ಆದರೆ ಅವರು ನೀಡಿದ ಉತ್ತರ ತೃಪ್ತಿದಾಯಕವಾಗಿಲ್ಲವೆಂಬ ಕಾರಣಕ್ಕೆ ಅಮಾನತು ಮಾಡಿರುವುದಲ್ಲದೆ ಡಿಎಂಕೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆಗೊಳಿಸಲಾಗಿದೆ.