alex Certify ವೇತನ ನೀಡದ ಸರ್ಕಾರಕ್ಕೆ ನೋಟಿಸ್ ನೀಡಿದ ವಲಸೆ ಕಾರ್ಮಿಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇತನ ನೀಡದ ಸರ್ಕಾರಕ್ಕೆ ನೋಟಿಸ್ ನೀಡಿದ ವಲಸೆ ಕಾರ್ಮಿಕರು

ದೇಶದಲ್ಲಿ ಕಾಣಿಸಿಕೊಂಡಿರುವ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ವೇಳೆ ತಮಗೆ ಈ ಸಂದರ್ಭದ ವೇತನ ನೀಡದಿರುವುದನ್ನು ಪ್ರಶ್ನಿಸಿ ಕಟ್ಟಡ ಕಾರ್ಮಿಕರು ನೋಟಿಸ್ ನೀಡಿರುವ ಘಟನೆ ಗುಜರಾತಿನಲ್ಲಿ ನಡೆದಿದೆ.

ಜಾರ್ಖಂಡ್ ಹಾಗೂ ಪಶ್ಚಿಮ ಬಂಗಾಳ ಮೂಲದ ಈ ಕಾರ್ಮಿಕರು ಅಹಮದಾಬಾದ್ ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕ್ಯಾಂಪಸ್ನಲ್ಲಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದರು.

ಲಾಕ್ ಡೌನ್ ಘೋಷಣೆಯಾದ ಬಳಿಕ ಇವರುಗಳಿಗೆ ತಮ್ಮ ಸ್ವಂತ ಊರುಗಳಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಅಲ್ಲದೆ ಈ ವೇಳೆ ವೇತನವನ್ನೂ ನೀಡಿರಲಿಲ್ಲನ್ನಲಾಗಿದೆ. ಇದನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರೊಂದಿಗೆ ಘರ್ಷಣೆ ನಡೆದಿತ್ತು.

ಇದೀಗ ವಲಸೆ ಕಾರ್ಮಿಕರು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ ಪ್ರಾಂಶುಪಾಲರು ಹಾಗೂ ಗುಜರಾತ್ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಲಾಕ್ ಡೌನ್ ಅವಧಿಯ ವೇತನ ಪಾವತಿಸುವಂತೆ ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...