ನವದೆಹಲಿ: ಎಐಸಿಸಿ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರನ್ನು ಮುಂದುವರೆಸಲು CWC ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ತಾವು ರಾಜೀನಾಮೆ ನೀಡುವುದಾಗಿ ಸೋನಿಯಾ ಗಾಂಧಿ ಹೇಳಿದರೂ ಒಪ್ಪದ ಸಿಡಬ್ಲ್ಯುಸಿ ಸಭೆ ಅವರನ್ನು ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯುವಂತೆ ಮನವಿ ಮಾಡಿದೆ.
ಇಂದು ಕಾಂಗ್ರೆಸ್ ವಲಯದಲ್ಲಿ ನಡೆದ ಅನಿರೀಕ್ಷಿತ ಬೆಳವಣಿಗೆ ನಡುವೆಯೂ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎನ್ನಲಾಗಿದೆ.