alex Certify BIG NEWS: AICC ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಅಚ್ಚರಿ ನಿರ್ಧಾರ ಕೈಗೊಂಡ CWC | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: AICC ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಅಚ್ಚರಿ ನಿರ್ಧಾರ ಕೈಗೊಂಡ CWC

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಇಂದು ನಡೆದ ಎಐಸಿಸಿ CWC ಸಭೆಯಲ್ಲಿ ಅನೇಕ ನಾಟಕೀಯ ಬೆಳವಣಿಗೆ ನಡೆದಿವೆ.

ಮುಂದಿನ ಒಂದು ವರ್ಷದವರೆಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯುವಂತೆ ಸೋನಿಯಾ ಗಾಂಧಿಯವರಿಗೆ ಪಕ್ಷದ ನಾಯಕರು ಮನವಿ ಮಾಡಿದ್ದಾರೆ. ಮುಂದಿನ ಅಧ್ಯಕ್ಷರ ಆಯ್ಕೆಯವರೆಗೂ ಸೋನಿಯಾ ಗಾಂಧಿ ಮುಂದುರೆಯಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ.

ರಾಜೀನಾಮೆ ನೀಡುವುದಾಗಿ ಹೇಳಿದ್ದ ಸೋನಿಯಾ ಗಾಂಧಿ ಹಿರಿಯರ ನಾಯಕರ ಒತ್ತಡಕ್ಕೆ ಮಣಿದು ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯಲು ಒಪ್ಪಿಕೊಂಡಿದ್ದಾರೆ. ಪಕ್ಷದಲ್ಲಿ ಆಂತರಿಕ ಚುನಾವಣೆ ನಡೆಸಬೇಕೆಂಬ ಅಭಿಪ್ರಾಯ ಕೇಳಿಬಂದಿದ್ದು, ಪೂರ್ಣಾವಧಿ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡುವ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆದಿದೆ. ಸೋನಿಯಾ ಗಾಂಧಿಯವರೇ ಅಧ್ಯಕ್ಷರಾಗಿ ಮುಂದುವರೆಯಬೇಕೆಂಬ ಒತ್ತಾಯ ಕೇಳಿಬಂದಿದೆ. ರಾಜೀನಾಮೆ ನೀಡಲು ನಿರ್ಧರಿಸಿದ್ದ ಸೋನಿಯಾಗಾಂಧಿ ಅವರೇ ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯಲು ಒಪ್ಪಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...