alex Certify ಕೊರೊನಾ ಏಕಾಏಕಿ ಹೆಚ್ಚಳವಾಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ʼಏಮ್ಸ್ʼ‌ ನಿರ್ದೇಶಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಏಕಾಏಕಿ ಹೆಚ್ಚಳವಾಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ʼಏಮ್ಸ್ʼ‌ ನಿರ್ದೇಶಕ

ಲಸಿಕೆ ಅಭಿಯಾನಗಳ ಬಳಿಕವೂ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರ್ತಿಲ್ಲ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2.34 ಲಕ್ಷ ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಅಲ್ಲದೇ ಒಂದೇ ದಿನದಲ್ಲಿ ದೇಶದಲ್ಲಿ 1300 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್​ ಕೇಸುಗಳ ಬಗ್ಗೆ ಏಮ್ಸ್ ನಿರ್ದೇಶಕ ಡಾ. ರಂದೀಪ್​ ಗುಲೇರಿಯಾ ಮಹತ್ವದ ಮಾಹಿತಿಗಳನ್ನ ಹಂಚಿಕೊಂಡಿದ್ದಾರೆ.

ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಆರಂಭವಾದ ವೇಳೆ ಅಂದರೆ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯೇ ಇತ್ತು. ಆದರೆ ಜನರು ಕೊರೊನಾ ಮಾರ್ಗಸೂಚಿಗಳನ್ನ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಈ ಬೇಜವಾಬ್ದಾರಿಯಿಂದಾಗಿಯೇ ದೇಶ ಇಂದು ಈ ಪ್ರಮಾಣದಲ್ಲಿ ಕೊರೊನಾ ಕೇಸ್​ಗಳನ್ನ ದಾಖಲಿಸುತ್ತಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಒಂದೇ ಸಲಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಕಾಣ್ತಿರುವ ಹಿನ್ನೆಲೆ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆ ಕಾಣ್ತಿದೆ. ಹೀಗಾಗಿ ಆದಷ್ಟು ಬೇಗ ಆಸ್ಪತ್ರೆಗಳ ಸಂಖ್ಯೆಯನ್ನ ಹೆಚ್ಚಿಸಲೇಬೇಕಿದೆ ಎಂದು ಗುಲೇರಿಯಾ ಹೇಳಿದ್ದಾರೆ.

ಜೀವಕ್ಕಿಂತ ಮುಖ್ಯವಾದದ್ದು ಯಾವುದೂ ಇಲ್ಲ. ಆದರೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ದೇಶದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಲೇ ಇದೆ. ಧಾರ್ಮಿಕ ಭಾವನೆಯಿಂದಾಗಿ ಜೀವವನ್ನ ಕಳೆದುಕೊಳ್ಳುವಂತಾಗಬಾರದು ಎಂದು ಗುಲೇರಿಯಾ ಕಳವಳ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಕೊರೊನಾ ಲಸಿಕೆಗಳು ಸೋಂಕಿನ ವಿರುದ್ಧ 100 ಪ್ರತಿಶತದಷ್ಟು ಪರಿಣಾಮಕಾರತ್ವವನ್ನ ಹೊಂದಿಲ್ಲ ಎಂಬ ವಿಚಾರವನ್ನ ಜನ ಮರೆಯುವ ಹಾಗಿಲ್ಲ.
ಲಸಿಕೆ ಹಾಕಿದ ಮಾತ್ರಕ್ಕೆ ನಿಮಗೆ ಸೋಂಕು ತಗುಲಲೇಬಾರದು ಎಂದೇನಿಲ್ಲ. ಲಸಿಕೆಗಳು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನ ಹೆಚ್ಚಿಸುವ ಕಾರ್ಯವನ್ನ ಮಾಡುತ್ತವೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...