ನವದೆಹಲಿ: ದೆಹಲಿಯಲ್ಲಿ ತಾಪಮಾನ ವಿಪರೀತ ಏರಿಕೆಯಾಗಿದ್ದು, ಕಾರಣಾಂತರದಿಂದಾಗಿ ಏರ್ ಇಂಡಿಯಾ ವಿಮಾನ 20 ಗಂಟೆ ತಡವಾಗಿ ಹೊರಟ ಪರಿಣಾಮ ಪ್ರಯಾಣಿಕರು ಉಸಿರಾಟದ ಸಮಸ್ಯೆಯಿಂದಾಗಿ ಪ್ರಜ್ಞೆತಪ್ಪಿ ಬಿದ್ದ ಘಟನೆ ನಡೆದಿದೆ.
ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೊಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನ 20 ಗಂಟೆ ವಿಳಂಭವಾಗಿದೆ. ವಿಮಾನದೊಳಗಿದ್ದ ಪ್ರಯಾಣಿಕರಿಗೆ ಉಸಿರಾಟದ ಸಮಸ್ಯೆ ಆರಂಭವಾಗಿದೆ. ಎಸಿ ವ್ಯವಸ್ಥೆಯೂ ಇಲ್ಲದೇ ಬಸವಳಿದು ಹೋಗಿದ್ದಾರೆ. ಕೆಲ ಪ್ರಯಾಣಿಕರು ಮೂರ್ಛೆ ಹೋಗಿದ್ದಾರೆ. ಬಳಿಕ ವಿಮಾನ ಸಿಬ್ಬಂದಿಗಳು ಪ್ರಯಾಣಿಕರಿಗೆ ವಿಮಾನದಿಂದ ಕೆಳಗಿಳಿಯುವಂತೆ ಸೂಚಿಸಿದ್ದಾರೆ.
ದೆಹಲಿಯಲ್ಲಿ ಉಷ್ಣಾಂಶ ಬುಧವಾರ 52.9 ಡಿಗ್ರಿ ಸೆಲ್ಸಿಯಸ್ ನಷ್ಟು ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ಬಿಸಿಲ ಜಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ಮಧ್ಯೆ ಏರ್ ಇಂಡಿಯಾ ವಿಮಾನ 20 ಗಂಟೆ ಪ್ರಯಾಣಿಕರನ್ನು ಕಾಯಿಸಿದ್ದು, ಈ ವೇಳೆ ಇಂತಹ ಅವಾಂತರಗಳು ಸಂಭವಿಸಿವೆ. ಘಟನೆಗೆ ವಿಷಾದ ವ್ಯಕ್ತಪಡಿಸಿರುವ ಏರ್ ಇಂಡಿಯಾ, ನಮ್ಮ ತಂಡ ಸೂಕ್ತವಾಗಿ ಸ್ಪಂದಿಸುತ್ತಿದೆ. ಪಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.
ರಾಷ್ಟ್ರ ರಾಜಧಾನಿ ಕಾದ ಕಾವಲಿಯಂತಾಗಿದ್ದರೆ ಇನ್ನೊಂದೆಡೆ ಬಿಹಾರದಲ್ಲಿ ಹೀಟ್ ಸ್ಟ್ರೋಕ್ ಸಂಭವಿಸುತ್ತಿದೆ. ಹೀಟ್ ಸ್ಟ್ರೋಕ್ ನಿಂದಾಗಿ 19 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.