
ಕರ್ನೂಲ್: ಕೊರೋನಾ ಸೋಂಕಿತ ವೃದ್ಧೆಯನ್ನು ಆಸ್ಪತ್ರೆಯ ಮುಂದೆಯೇ ಆಂಬುಲೆನ್ಸ್ ಸಿಬ್ಬಂದಿ ಎಸೆದು ಹೋದ ಘಟನೆ ಆಂಧ್ರಪ್ರದೇಶದ ಕರ್ನೂಲ್ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.
ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವೃದ್ಧೆಯನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಆಸ್ಪತ್ರೆಗೆ ದಾಖಲಿಸದ ಸಿಬ್ಬಂದಿ ರಸ್ತೆಯಲ್ಲಿಯೇ ವೃದ್ಧೆಯನ್ನು ಎಸೆದು ಹೋಗಿದ್ದಾರೆ. ಅಂಬುಲೆನ್ಸ್ ಸಿಬ್ಬಂದಿಯ ಅಮಾನವೀಯ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.