ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾ ಸೋಂಕು ತಗಲಿದ ಅವರು ಈ ಮೊದಲು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕೊರೋನಾ ನೆಗೆಟಿವ್ ಬಂದ ನಂತರ ಬಿಡುಗಡೆಯಾಗಿದ್ದರು. ಅವರ ಆರೋಗ್ಯದಲ್ಲಿ ಸುಧಾರಣೆ ಕಾಣದ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಈಗ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಆಗಸ್ಟ್ 2 ರಂದು ಕೊರೊನಾ ಪಾಸಿಟಿವ್ ವರದಿ ಬಂದಿದ್ದರಿಂದ ದೆಹಲಿಯ ಮೆದಾಂತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನೆಗೆಟಿವ್ ವರದಿ ಬಂದಿದ್ದರಿಂದ ಬಿಡುಗಡೆಯಾಗಿದ್ದರು. ಆಗಸ್ಟ್ 18 ರಂದು ಏಮ್ಸ್ ಪೋಸ್ಟ್ ಕೋವಿಡ್ ಕೇರ್ ಗೆ ದಾಖಲಾಗಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.