ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ತಮಗೆ ಸೋಂಕು ತಗಲಿರುವ ಬಗ್ಗೆ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ನಾನು ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದು ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. ನನ್ನ ಸಂಪರ್ಕಕ್ಕೆ ಬಂದವರು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅವರು ಹೇಳಿದ್ದಾರೆ.
ಕೊರೊನಾ ಲಕ್ಷಣಗಳು ಕಂಡುಬಂದರೂ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.