ನವದೆಹಲಿ: ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೇದಾಂತ್ ಆಸ್ಪತ್ರೆಗೆ ಅಮಿತ್ ಶಾ ದಾಖಲಾಗಿದ್ದು ತಜ್ಞ ವೈದ್ಯರಿಂದ ಅವರ ಆರೋಗ್ಯ ತಪಾಸಣೆ ನಡೆಸಲಾಗಿದೆ. ಆಕ್ಸಿಜನ್ ಲೆವೆಲ್ ಬಗ್ಗೆ ಪರಿಶೀಲನೆ ನಡೆಸುತ್ತಿರುವ ತಜ್ಞ ವೈದ್ಯರು ಚಿಕಿತ್ಸೆ ಆರಂಭಿಸಿದ್ದಾರೆ.
ಸಂಪುಟ ಸಭೆಯಲ್ಲಿ ಅಮಿತ್ ಶಾ ಭಾಗಿಯಾಗಿದ್ದರು. ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು. ಅಂತರ ಕಾಯ್ದುಕೊಂಡು ಸಭೆ ನಡೆಸಲಾಗಿತ್ತು. ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಸಲಹೆ ನೀಡಲಾಗಿದೆ.
ಅಮಿತ್ ಶಾ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದಾರೆ.