alex Certify ಸ್ನೇಹಿತರೊಂದಿಗೆ ಪಾರ್ಟಿಗೆ ಹೋದ ಬಿಜೆಪಿ ನಾಯಕನ ಸೊಸೆ ನಿಗೂಢ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ನೇಹಿತರೊಂದಿಗೆ ಪಾರ್ಟಿಗೆ ಹೋದ ಬಿಜೆಪಿ ನಾಯಕನ ಸೊಸೆ ನಿಗೂಢ ಸಾವು

Andhra BJP chief's daughter-in-law dies mysteriously at friend's party

ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಕನ್ನಾ ಲಕ್ಷ್ಮಿ ನಾರಾಯಣ ಅವರ ಸೊಸೆ ನಿಗೂಢವಾಗಿ ಸಾವಿಗೀಡಾಗಿದ್ದಾರೆ. ಕನ್ನಾ ಲಕ್ಷ್ಮೀನಾರಾಯಣ ಅವರ ಎರಡನೇ ಪುತ್ರ ಫಣೀಂದ್ರ ಪತ್ನಿಯಾಗಿರುವ ಸುಹಾರಿಕಾ ರೆಡ್ಡಿ ಹೈದರಾಬಾದ್ ನ ರಾಯದುರ್ಗಂ ಪ್ರದೇಶದಲ್ಲಿ ಮೃತಪಟ್ಟಿದ್ದಾರೆ. 32 ವರ್ಷದ ಸುಹಾರಿಕಾ ರೆಡ್ಡಿ ನಿಗೂಢವಾಗಿ ಸಾವನ್ನಪ್ಪಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಮಾಧುಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಮೀನಾಕ್ಷಿ ಟವರ್ ಅಪಾರ್ಟ್ ಮೆಂಟ್ ನಲ್ಲಿ ಸ್ನೇಹಿತರೊಂದಿಗೆ ಸುಹಾರಿಕಾ ಪಾರ್ಟಿ ಮಾಡಿದ್ದಾರೆ. ಪಾರ್ಟಿಯಲ್ಲಿ ಬಹು ಹೊತ್ತಿನವರೆಗೆ ಡ್ಯಾನ್ಸ್ ಮಾಡುತ್ತಿದ್ದ ಅವರು ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಸುಹಾರಿಕಾ ಕೆಳಗೆ ಬಿದ್ದ ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಈ ವೇಳೆಗೆ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಮಾಧುಪುರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ಕಾರಣ ಗೊತ್ತಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...